Skip to main content
✍🌹 *ಇಂದು ರಾಷ್ಟ್ರೀಯ ವಿಜ್ಞಾನ ದಿನ*
🔬🔬🔬🔬🔬🔬🔬🔬🔬🔬
*ಜೈ ವಿಜ್ಞಾನ್, ಜೈ ವಿಜ್ಞಾನ್*
(Mallikarjun Hulasur,Mudhol)
🔬👉  *ರಾಷ್ಟ್ರೀಯ ವಿಜ್ಞಾನ ದಿನ ದೇಶಾದ್ಯಂತ ಫೆಬ್ರವರಿ 28ಅನ್ನು ರಾಷ್ಟ್ರೀಯ ವಿಜ್ಞಾನ ದಿನವಾಗಿ ಆಚರಿಸಲಾಗುತ್ತದೆ. 1999ರಿಂದ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ರಾಷ್ಟ್ರೀಯ ವಿಜ್ಞಾನ ದಿನದಂದು ಚರ್ಚಿಸಲಾಗುವ ವಿಷಯವನ್ನು ಮೊದಲೇ ಘೋಷಿಸುತ್ತದೆ. ಏತಕ್ಕಾಗಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ ಎಂಬ ಬಗ್ಗೆ ಕಿರು ಮಾಹಿತಿ ಇಲ್ಲಿದೆ.*

🌹 *ಏನಿದು ರಾಷ್ಟ್ರೀಯ ವಿಜ್ಞಾನ ದಿನ*

*ವಿಜ್ಞಾನ ಜಗತ್ತಿನಲ್ಲಿ ಭಾರತವನ್ನು ಮೇರು ಶಿಖರಕ್ಕೆ ಕೊಂಡೊಯ್ದ ಸರ್‌ ಸಿ.ವಿ.ರಾಮನ್‌ ಅವರ ಅಪೂರ್ವ ಸಾಧನೆಗಳ ನೆನಪಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ರಾಮನ್‌ ಅವರು ಬೆಂಗಳೂರಿನ ಸೆಂಟ್ರಲ್‌ ಕಾಲೇಜಿನ ಸಭಾಂಗಣದಲ್ಲಿ ಕ್ರಿ.ಶ.1928ರ ಫೆಬ್ರವರಿ 28ರಂದು ಬೆಳಕಿನ ಚದುರಿವಿಕೆಯಲ್ಲಿ ಸಾಮಗ್ರಿಗಳ ಗುಣಲಕ್ಷ ಣಗಳ ಪರಿಣಾಮದ ಬಗ್ಗೆ ಹೊಸ ಹೊಳಹೊಂದನ್ನು ಪ್ರತಿಪಾದಿಸಿದ ದಿನ. ಮುಂದಿನ ದಿನಗಳಲ್ಲಿ ಅದು ರಾಮನ್‌ ಪರಿಣಾಮವೆಂದೇ ಪ್ರಸಿದ್ಧವಾಯಿತು. ಈ ಹಿನ್ನೆಲೆಯಲ್ಲಿ 1987 ಫೆಬ್ರವರಿ 28ರಂದು ದೇಶಾದ್ಯಂತ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತಿದೆ.*

🌹👉 *ಆಚರಣೆಯ ಉದ್ದೇಶ*

*ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ, ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ ಹೀಗೆ ನಾನಾ ಚಟುವಟಿಕೆಗಳನ್ನು ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ. ಪ್ರತೀ ವರ್ಷ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಚಟುವಟಿಕೆಗಳನ್ನು ಒಂದು ನಿರ್ದಿಷ್ಟ ವಿಷಯದ ಸುತ್ತ ಆಯೋಜಿಸಲಾಗುತ್ತದೆ.*

🌹🔬👉 *ರಾಮನ್‌ ಕುರಿತಂತೆ*
(Mallikarjun Hulasur)
*ವಿಜ್ಞಾನದಲ್ಲಿ ನೊಬೆಲ್‌ ಪ್ರಶಸ್ತಿ ಪಡೆದ ಏಷ್ಯಾದ ಮೊತ್ತಮೊದಲ ವಿಜ್ಞಾನ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿ.ವಿ. ರಾಮನ್‌ ಅವರ ಪೂರ್ಣ ಹೆಸರು ಚಂದ್ರಶೇಖರ ವೆಂಕಟರಾಮನ್‌ . ಜನಿಸಿದ್ದು ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ 1888ರ ನವೆಂಬರ್‌ 7ರಂದು . ಅವರ ತಂದೆ ಚಂದ್ರಶೇಖರ್‌ ಅಯ್ಯರ್‌ ಗಣಿತ ಹಾಗೂ ಭೌತವಿಜ್ಞಾನದ ಶಿಕ್ಷಕರಾಗಿದ್ದರು. ರಾಮನ್‌ ಅವರು ಕಲ್ಕತಾ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ, ಮುಂದೆ ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಸೈನ್ಸ್‌ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.*

🌹 *ರಾಮನ್‌ ಪರಿಣಾಮ*

*ಒಮ್ಮೆ ಹಡಗಿನಲ್ಲಿ ಪ್ರಯಾಣಿಸುವಾಗ ರಾಮನ್‌ ಅವರಿಗೆ ಸಮುದ್ರ ಏಕೆ ಯಾವಾಗಲೂ ನೀಲಿಯಾಗಿಯೇ ಕಾಣುತ್ತದೆ ಎಂಬ ಪ್ರಶ್ನೆ ಎದುರಾಯಿತಂತೆ. ಅದು ಆಕಾಶದ ಬಣ್ಣದ ಪ್ರತಿಫಲನವೋ ಅಥವಾ ಈ ನೀಲಿ ಬಣ್ಣದ ಹಿಂದೆ ಬೇರೇನಾದರೂ ಗುಟ್ಟು ಅಡಗಿದೆಯೋ ಎಂದು ಪತ್ತೆಮಾಡಲು ಹೊರಟ ರಾಮನ್‌ ಸೂರ್ಯನ ಬೆಳಕು ನೀರಿನಲ್ಲಿ ಚದುರಿಹೋಗುವುದೇ ಸಮುದ್ರದ ನೀರು ನೀಲಿಯಾಗಿ ಕಾಣಲು ಕಾರಣ ಎಂಬ ವಿಷಯ ಕಂಡುಹಿಡಿದರು. ಇದೇ ಅಂಶ ಮುಂದೆ ಅವರು ತಮ್ಮ ಅಧ್ಯಯನವನ್ನು ಮುಂದುವರೆಸಲು ಪ್ರೇರಣೆಯಾಯಿತು. ಕೋಲ್ಕತಾದ ಇಂಡಿಯನ್‌ ಅಸೋಸಿಯೇಷನ್‌ ಫಾರ್‌ ಕಲ್ಟಿವೇಷನ್‌ ಆಫ್‌ ಸೈನ್ಸ್‌ನಲ್ಲಿ ರಾಮನ್‌ ಅವರು ತಮ್ಮ ಸಹೋದ್ಯೋಗಿಗಳೊಡನೆ ನಡೆಸಿದ ಅಧ್ಯಯನಗಳ ಪರಿಣಾಮವೇ ರಾಮನ್‌ ಪರಿಣಾಮದ ಶೋಧ. ಇದೇ ಸಾಧನೆಗಾಗಿ ಅವರಿಗೆ 1930ನೇ ಇಸವಿಯಲ್ಲಿ ನೊಬೆಲ್‌ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದು ವಿಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ದೊರೆತ ಮೊತ್ತಮೊದಲ ನೊಬೆಲ್‌ ಪುರಸ್ಕಾರವೂ ಹೌದು.*

  🌹🔬✍ *ಫೆಬ್ರುವರಿ 28 ರಂದು ದೇಶದಾದ್ಯಂತ ವಿಜ್ಞಾನದ ದಿನವನ್ನಾಗಿ ಆಚರಿಸುತ್ತೇವೆ. ಅಂದು ಡಾ: ಸರ್. ಸಿ.ವಿ. ರಾಮನ್ ರವರು ‘ರಾಮನ್ ಪರಿಣಾಮ’ ಎಂಬ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ನಿರೂಪಿಸಿ ತೋರಿಸಿದ ದಿನ.*

👉 *ರಾಮನ್ ಪರಿಣಾಮದ ಮಹತ್ವ :*

*ಇಂದು `ರಾಮನ್ ಪರಿಣಾಮ’ ದ್ರವ್ಯದ ಅಣುರಚನೆಯನ್ನು ನಿರ್ಧರಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಮೈಕ್ರೋವೇವ್, ಲೇಸರ್, ಇನ್ಫ್ರಾರೆಡ್, ಅಲ್ಟ್ರಾ ವಯೋಲೆಟ್, ಮತ್ತು ಕ್ಷ-ಕಿರಣ ರಾಮನ್ ಸ್ಪೆಕ್ಟ್ರೋಸ್ಕೋಪಿ ಇಂದು ಮುಂಚೂಣಿಯಲ್ಲಿರುವ ಸಂಶೋಧನಾ ಕ್ಷೇತ್ರಗಳು. ಭೌತ, ಜೀವ, ರಸಾಯನ ಮತ್ತು ಖಗೋಳ ವಿಜ್ಞಾನ ಹಾಗೂ ನ್ಯಾನೋ ತಂತ್ರಜ್ಞಾನದ ಹಲವು ವಿಭಾಗಗಳಲ್ಲಿ ಇದರ ಪರಿಣಾಮವಿದೆ.*

*ರಾಮನ್ ಪರಿಣಾಮ ಕುರಿತು ಆಲ್ಬರ್ಟ್ ಐನ್ಸ್ಟೀನ್ ಸರಳವಾಗಿ ಈ ರೀತಿ ಹೇಳಿದ್ದಾರೆ: “ವಸ್ತುವಿನಲ್ಲಿ ಬೆಳಕಿನ ಚದುರುವಿಕೆಯಿಂದ ಬೆಳಕಿನ ಶಕ್ತಿಯಲ್ಲಾಗುವ ಬದಲಾವಣೆಯನ್ನು ಗುರುತಿಸಿದವರಲ್ಲಿ ರಾಮನ್ ಮೊದಲಿಗರು. ನನಗಿನ್ನೂ ಸ್ಪಷ್ಟವಾಗಿ ನೆನಪಿದೆ – ಬರ್ಲಿನ್ನಿನ ಭೌತಶಾಸ್ತ್ರ ಗೋಷ್ಟಿಯಲ್ಲಿ ಭಾಗವಹಿಸಿದ ನಮ್ಮೆಲ್ಲರ ಮೇಲೆ ಈ ಆವಿಷ್ಕಾರ ಗಾಢ ಪರಿಣಾಮ ಬೀರಿತ್ತು”.*

*ಇಂದಿನ ದುರಂತವೆಂದರೆ, ‘ರಾಮನ್ ಪರಿಣಾಮ’ ವನ್ನು ಈ ದೇಶದಲ್ಲಿಯೇ ಆವಿಷ್ಕರಿಸಿದ್ದರೂ ಕೂಡ, ಈ ಪರಿಣಾಮದ ಆಧಾರದಲ್ಲಿ ಕಾರ್ಯನಿರ್ವಹಿಸುವ ಲೇಸರ್ ಉಪಕರಣಗಳನ್ನು ತಯಾರಿಸಲಾಗದೇ ಇಂದಿಗೂ ಆಮದು ಮಾಡಿಕೊಳ್ಳುತ್ತಿದ್ದೇವೆ.*
(Mallikarjun Hulasur)
✍ 🌹 *ಸ್ವಾವಲಂಬಿ ಸಂಶೋಧನಾಲಯಗಳ ಸ್ಥಾಪನೆ :*

*ಬಂಗಾಳದಲ್ಲಿ ರಾಜ್ಯ ವಿಭಜನೆ ವಿರುದ್ದ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಟಗಳು ತೀವ್ರಗೊಂಡಿದ್ದ ಕಾಲವದು. ಇದರಿಂದಾಗಿ ಪ್ರತಿಷ್ಟಿತ ವಿಜ್ಞಾನ ಸಂಸ್ಥೆಗಳಲ್ಲಿ ಭಾರತೀಯರೇ ಹುದ್ದೆ ಅಲಂಕರಿಸಬೇಕೆಂದು ಕೋಲ್ಕತ್ತಾ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತೀರ್ಮಾನಿಸಿತ್ತು. ಇದರಿಂದಾಗಿ ಪ್ರತಿಭಾನ್ವಿತ ರಾಮನ್ರವರು ತಾವು ಕೆಲಸ ಮಾಡುತ್ತಿದ್ದ ಐಸಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಪ್ರೊಫೆಸರ್ ಹುದ್ದೆಗೆ ವಿಶ್ವವಿದ್ಯಾಲಯ ಸೇರಿದರು.*

*1921 ರಲ್ಲಿ ಇಂಗ್ಲೆಂಡಿನಲ್ಲಿ ವೈಜ್ಞಾನಿಕ ಸಮ್ಮೇಳನದಲ್ಲಿ ಭಾಗವಹಿಸಿ ಹಡಗಿನಲ್ಲಿ ಭಾರತಕ್ಕೆ ರಾಮನ್ ಪ್ರಯಾಣಿಸುತ್ತಿದ್ದರು. ಆಗವರು ಕೋಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರದ ಅಧ್ಯಾಪಕರಾಗಿದ್ದರು. ಅಷ್ಟರಲ್ಲಾಗಲೇ ಅವರು ದೃಗ್ವಿಜ್ಞಾನ ಮತ್ತು ಧ್ವನಿ ವಿಜ್ಞಾನಗಳ ಅಧ್ಯಯನದಲ್ಲಿ ನಡೆಸಿರುವ ಸಂಶೋಧನೆ ಕುರಿತು ಇಂಗ್ಲೆಂಡ್ನ ಜೆ.ಜೆ. ಥಾಮ್ಸನ್ ಮತ್ತು ಲಾರ್ಡ್ ರುದರ್ಫರ್ಡ್ ರಂಥಹ ವಿಜ್ಞಾನಿಗಳ ಗಮನ ಸೆಳೆದಿದ್ದರು.*

*ಹಡಗಿನ ಪಯಣದಲ್ಲಿ ಸಾಗರದ ಶುಭ್ರ ನೀಲಿ ಬಣ್ಣವನ್ನು ಕಂಡು ವಿಸ್ಮಯಗೊಂಡರು. ಆಗಸದ ನೀಲಿ ಬಣ್ಣಕ್ಕೆ ಕಾರಣವೇನೆಂದು ಲಾರ್ಡ್ ರಾಲೆ ಎಂಬ ವಿಜ್ಞಾನಿ ಅದಾಗಲೇ ವಿವರಣೆ ನೀಡಿ ನೊಬೆಲ್ ಪ್ರಶಸ್ತಿ ಪಡೆದುಕೊಂಡಿದ್ದ. ವಾಯುಮಂಡಲದಲ್ಲಿರುವ ಧೂಳಿನ ಕಣಗಳು ಮತ್ತು ವಿವಿಧ ಅನಿಲಗಳು ಬೆಳಕನ್ನು ಚದುರಿಸುವುದರಿಂದ ಬೆಳಕಿನಲ್ಲಿರುವ ನೀಲಿ ಬಣ್ಣ ಹೆಚ್ಚು ಚದುರುತ್ತದೆ, ಹಾಗಾಗಿ ಬಾನಿನ ಬಣ್ಣ ನೀಲಿ ಎಂದು ವಿವರಿಸಿದ್ದ. ಆದರೆ ಸಮುದ್ರದ ಬಣ್ಣಕ್ಕೆ ಕಾರಣ ಕೊಡಲು ಸಾಧ್ಯವಾಗಿರಲಿಲ್ಲ.*

*ರಾಮನ್ ಕಣ್ಣ ಮುಂದೆ ನೀಲಿ ಬಣ್ಣ ಹೊದ್ದ ನೀರು ಕಂಗೊಳಿಸುತ್ತಿತ್ತು. ಮೈ ಮನವೆಲ್ಲ ಬೆಳಕಿನ ಚದುರುವಿಕೆಯ ವಿಷಯದಲ್ಲಿ ಲೀನವಾಗಿತ್ತು. ನೀರಿನ ಅಣುಗಳು ಬೆಳಕಿನಲ್ಲಿರುವ ನೀಲಿ ಬಣ್ಣವನ್ನು ಹೆಚ್ಚಿನ ಪ್ರಮಾಣದಲ್ಲಿ ಚದುರಿಸುವುದೇ ಈ ನೀಲಿಗೆ ಕಾರಣವೆಂದು ಆಲೋಚಿಸತೊಡಗಿದರು. ಸಮುದ್ರದ ನೀರನ್ನು ಅಲ್ಲಿಯೇ ಪಾತ್ರೆಗಳಲ್ಲಿ ಸಂಗ್ರಹಿಸಿ ರೋಹಿತ ದರ್ಶಕ ಬಳಸಿ ಹಡಗಿನಲ್ಲಿಯೇ ಪ್ರಯೋಗ ಮಾಡತೊಡಗಿದರು. ಹಡಗು ಮುಂಬೈ ಬಂದರು ತಲುಪುವ ಹೊತ್ತಿಗೆ ಅವರ ಪ್ರಯೋಗ ಫಲಿತಾಂಶಗಳು ಸಂಶೋಧನ ಲೇಖನವಾಗಿದ್ದವು. ಶೀಘ್ರದಲ್ಲೇ ಪ್ರಸಿದ್ದ “ನೇಚರ್” ಪತ್ರಿಕೆಯಲ್ಲಿ ಪ್ರಕಟವಾದವು.*

🙏 *ಜೈ ವಿಜ್ಞಾನ್*🙏
(Mallikarjun Hulasur)

Comments

Popular posts from this blog

ಪತ್ರಲೇಖನ

ಪತ್ರಲೇಖನ ಪೀಠಿಕೆ ನಮ್ಮ ಎದುರಿಗೆ ಇರುವವರ ಜೊತೆ ಸಂಭಾಷಣೆ ನಡೆಸಿದಂತೆ ದೂರದಲ್ಲಿರುವ (ಬೇರೆಡೆಯಲ್ಲಿ ವಾಸಿಸುತ್ತಿರುವ)ವ್ಯಕ್ತಿಗಳ ಜೊತೆ ಮಾತುಕತೆಗೆ ,ಪರಸ್ಪರ ವಿಚಾರ ವಿನಿಮಯಕ್ಕೆ ಬಳಕೆಯಾಗುವ ಪರಿಣಾಮಕಾರಿ ಸಾಧನ ಪತ್ರ. ಪತ್ರಲೇಖನ ಒಂದು ಕಲೆ . ಹಿಂದೊಮ್ಮೆ ಇದು ಬಹಳ ಪರಿಣಾಮಕಾರಿಯಾದ ಸಂಪರ್ಕ ಸಾಧನವಾಗಿತ್ತು. ಪುರಾಣ ,ಕಾವ್ಯಗಳಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಂದೇಶ ಕಳಿಸುವಾಗ ಪಾರಿವಾಳಗಳ ಮೂಲಕ ಕಳಿಸುವ ಪರಿಪಾಠವಿತ್ತು. ಕಾಳಿದಾಸನ ಮೇಘ ಸಂದೇಶ ಕಾವ್ಯದಲ್ಲಿ ಸಂದೇಶವನ್ನು ಕಳಿಸಲು ಮೇಘಗಳನ್ನು ಬಳಸಿದ್ದನ್ನು ನೋಡಬಹುದು. ಕಾಲಾನಂತರದಲ್ಲಿ ಸಂದೇಶಗಳನ್ನು ಕಳಿಸಲು ದೂತರು ಕುದುರೆಯ ಮೇಲೆ ಸಾಗುತ್ತಿದ್ದರು. ಎಲೆಗಳ ಮೇಲೆ ಬರೆಯುತ್ತಿದ್ದ ಸಂದೇಶಗಳು ಕ್ರಮೇಣ ಕಾಗದಗಳ ಮೇಲೆ ಬರೆಯಲ್ಪಟ್ಟು ಅಂಚೆ ಇಲಾಖೆಗಳ ಮೂಲಕ ಪತ್ರದ ರೂಪ ತಾಳಿ ಪತ್ರವ್ಯವಹಾರ ಪ್ರಾರಂಭವಾಯಿತು. ಇಂದು ದೂರವಾಣಿ ,ಮೊಬೈಲ್ ,ಗಣಕಯಂತ್ರ ಗಳು ಬಂದ ಮೇಲೆ ಪತ್ರವ್ಯವಹಾರವು ತನ್ನ ಮೊದಲಿನ ಪ್ರಾಮುಖ್ಯತೆಯನ್ನು ಕಳೆದುಕೊಂಡಿದೆ. ಇಂದು ಅಂತರ್ಜಾಲ ಸೌಲಭ್ಯದಿಂದಾಗಿ ಹೆಚ್ಚಿನ ಸಂದೇಶಗಳು ಮಿಂಚಂಚೆಯ (mail) ಮೂಲಕ ರವಾನೆಯಾಗುತ್ತಿವೆ. ಮೊಬೈಲ್‌ನಲ್ಲಿ ಎಷ್ಟೋ ದೂರದಲ್ಲಿರುವವರಿಗೆ whatsapp ,hike ,telegram ಇವೇ ಮೊದಲಾದ ವ್ಯವಸ್ಥೆಗಳ ಮೂಲಕ ಕ್ಷಣ ಮಾತ್ರದಲ್ಲಿ ಸಂದೇಶವನ್ನು ರವಾನಿಸಬಹುದಾಗಿದೆ. ಹಾಗಾಗಿ ಇಂದು ಪತ್ರ ಬರೆಯುವವರ ಸಂಖ್ಯೆ ಕಡಿಮೆಯಾಗುತ್ತಿದೆ. ...

ಕನ್ನಡ ವ್ಯಾಕರಣ

ಕನ್ನಡ ವ್ಯಾಕರಣ ಕನ್ನಡ ಪಠ್ಯ ಕ್ರಮ 1. ವ್ಯಾಕರಣ 2. ಛಂದಸ್ಸು 3 ಅಲಂಕಾರ 4. ಸಾಹಿತ್ಯ ಚರಿತ್ರೆ I. ವ್ಯಾಕರಣ ಭಾಷೆಯ ಸ್ವರೂಪ ಜ್ನಾನ ಅರ್ಥಗಳಲ್ಲದೆ ಉಚ್ಛಾರ ಶೃತಿಗಳನ್ನು ವ್ಯವಸ್ಥಿತವಾಗಿ ನಿಯಮಗಳ ಮೂಲಕ ತಿಳೀಸುವುದೇ ವ್ಯಾಕರಣ ಶಾಸ್ತ ವ್ಯಾಕರಣದ ಬಗ್ಗೆ ತಿಳಿಸುವುವರು ವೈಯಾಕರಣಿಗಳು II ಛಂದಸ್ಸು ಕಾವ್ಯರಚನೆ ಸೌಂಧರ್ಯ ಸೊಭಗತೆಯನ್ನು ಸೂತ್ರ ರೊಪದಲ್ಲಿ ಪರಿಚಯಿಸುದೇ ಛಂದಸ್ಸು ಶಾಸ್ತ್ರ II. ಅಲಂಕಾರಗಳು ಕಾವ್ಯದೇವಿಯನ್ನು ಶಬ್ಧ ಅರ್ಥಗಳ ಉಡುಗೆತೊಡಿಗೆಗಳಿಂದ ಶೋಭಿಸುವಂತೆ ಅಲಂಕರಿಸುವುದೇ ಅಲಂಕಾರ ಶಾಸ್ತ್ರ ಮೇಲಿನ ಮೂರು ಪ್ರಕರಣ ಅಂದರೆ ವ್ಯಾಕರಣ, ಛಂದಸ್ಸು ಮತ್ತು ಅಲಂಕಾರಗಳನ್ನೊಳಗೊಂಡ ಗ್ರಂಥಕ್ಕೆ ಲಕ್ಷಣ ಗ್ರಂಥ ಎನ್ನುವರು. ಮೊಟ್ಟ ಮೊದಲಿಗೆ ಹಳಗನ್ನಡದಲ್ಲಿ ವ್ಯಾಕರಣದ ಬಗ್ಗೆ ಹೇಳಿದವನು 1. 2ನೇ ನಾಗವರ್ಮ ಅಥವಾ ಇಮ್ಮಡಿ ನಾಗವರ್ಮ ಕಾಲ: 11ನೇ ಶತಮಾನ ಕೃತಿಗಳು 1. ಕರ್ನಾಟಕ ಭಾಷಾ ಭೂಷಣ 2. ಕಾವ್ಯಾವಲೋಕನ 3. ವರ್ಧಮಾನ ಪುರಾಣ 4. ಅಭಿದಾನ ವಸ್ತು ಕೋಶ 5. ಛಂದೋ ವಿಚಿತಿ 2. ಕನ್ನಡ ಶ್ರೇಷ್ಠ ವೈಯಾಕರಣಿ ಮತ್ತು ಶ್ರೇಷ್ಠ ಗ್ರಂಥ ಕೇಶಿ ರಾಜ ಕಾಲ: 13 ನೇ ಶತಮಾನ (1260) ಶ್ರೇಷ್ಠ ಕೃತಿ: ಶಬ್ಧಮಣಿದರ್ಪಣ ಇದರಲ್ಲಿ 8 ಭಾಗಗಳಿವೆ 3. ಭಟ್ಟಾಕಳಂಕಾ ಕಾಲ: 16 ಮತ್ತು 17 ನೆ ಶತಮಾನ ಕೃತಿ : ಶಬ್ಢ ಅನುಶಾಸನ. ಇದು ಸಂಸ್ಕೃತದಲ್ಲಿದೆ ಪ್ರಸ್ತುತ ಕನ್ನಡ ವರ್ಣಮಾಲೆ 49 ಸ್ವರಗಳು ಕನ್ನಡದಲ್ಲಿ ಒಟ್ಟು...
Do try this - it's pretty accurate I think.....😅😅 In the middle of the table was a round food tray with 5 kinds of fruit in it. There are: a. Apple b. Banana c. Mango d. Grapes e. Orange Which fruit will u choose? Your choice reveals about u! Pls be very Honest to yourself….. & Now scroll down for results: . . . . . . . . . . . . . . . . . . . . . . . . . . . . . . . . . . . . . . . . . . . . . . . . . . . . . . . . Here are the results. A. if you chosen Apple : that means you are a person who loves to eat Apple B. if you chosen banana : that means you are a person who loves to eat Banana C. if you chosen mango : that means you are a person who loves to eat mango D. if you chosen grapes : that means you are a person who loves to eat grapes E. if you chosen orange : that means you are person who loves to eat Orange Note: If you are hunting for me to punch …..Well…I am busy hunting for th...