ಶಿವಕುಮಾರ ಸ್ವಾಮಿಜಿ ಅವರಿಗೆ 111ನೆ ಹುಟ್ಟು ಹಬ್ಬದ ಸವಿ ಹಾರೈಕೆಗಳು
ಏಪ್ರಿಲ್ ೧,೧೯೦೮
ಕರ್ನಾಟಕ ರತ್ನ ಡಾ|| ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದ ಮಠಾಧಿಪತಿಗಳು. [೧]ಇವರು ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿ. ೧೨ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ "ಕಾಯಕವೇ ಕೈಲಾಸ" ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಗಳು. ಮಾರ್ಚ್ ೩, ೧೯೩೦ರಲ್ಲಿ ಇವರು ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ವೀರಶೈವ ಧರ್ಮ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ.
ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನಪ್ಪ ಮತ್ತು ತಾಯಿ ಗಂಗಮ್ಮನವರಿಗೆ ಎಪ್ರಿಲ್ ೧, ೧೯೦೮ರಲ್ಲಿ ಶಿವಣ್ಣನವರಾಗಿ ಜನಿಸಿ, ೧೯೧೩ರಲ್ಲಿ ಪ್ರಾಥಮಿಕ ಮತ್ತು ೧೯೨೧ರಲ್ಲಿ ಮಾಧ್ಯಮಿಕ ವಿದ್ಯಾಭ್ಯಾಸವನ್ನು ನಾಗವಲ್ಲಿಯಲ್ಲಿ ಮುಗಿಸಿ ೧೯೨೨ರಲ್ಲಿ ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿತು ೧೯೨೬ರಲ್ಲಿ ಮೆಟ್ರಿಕ್ಯುಲೇಷನ್ ಗಳಿಸಿದರು. ೧೯೨೭ರಲ್ಲಿ ಆಗಿನ ಸಿದ್ದಗಂಗಾ ಮಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಉದ್ದಾನ ಶಿವಯೋಗಿಗಳವರೊಡನಾಟ ಆಯಿತು. ಇದೇ ವರ್ಷ ಎಂಟ್ರೆನ್ಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ಸೇರಿದರು.
ಶ್ರೀಗಳ ದಿನಚರಿ
ಪ್ರರಿದಿನವೂ ಶ್ರೀಗಳು ಬೆಳಗಿನ ನಾಲ್ಕುಗಂಟೆಗೆ ಎದ್ದು ಸ್ನಾನಮಾಡಿ, ಪೂಜಾಕೋಣೆಯಲ್ಲಿ ಒಂದು ತಾಸಿಗೂ ಹೆಚ್ಚು ಸಮಯ ಧ್ಯಾನದಲ್ಲಿ ತಲ್ಲೀನರಾಗುತ್ತಾರೆ. ನಂತರ ಇಷ್ಟಲಿಂಗ ಪೂಜೆ. ದೂರದಿಂದ ಸ್ವಾಮಿಗಳ ದರ್ಶನಕಾಗಿ ಬರುವ ಭಕ್ತರಿಗೆ ತ್ರಿಪುಂಢ್ರ ಭಸ್ಮವನ್ನು ಕೊಟ್ಟು ತಾವೂ ಧರಿಸಿ, ಪೂಜೆಯನ್ನು ಮುಗಿಸುತ್ತಾರೆ. ನಂತರ ಆಹಾರ ಸೇವನೆ, ಮುಂಜಾನೆ ಆರೂವರೆಗಂಟೆಗೆ. ಒಂದು ಅಕ್ಕಿ-ಇಡ್ಲಿ, ಸ್ವಲ್ಪ ಹೆಸರುಬೇಳೆ-ತೊವ್ವೆ, 'ಸಿಹಿ' ಹಾಗೂ 'ಖಾರ ಚಟ್ನಿ' ಸೇವನೆ. ಎರಡು ತುಂಡು ಸೇಬು. ಇದರ ಬಳಿಕ, 'ಬೇವಿನ-ಚಕ್ಕೆ ಕಷಾಯ' ಸೇವನೆಯಾಗುತ್ತದೆ.

Comments
Post a Comment